ಬೆಳ್ತಂಗಡಿ : ಹೈಕಮಾಂಡ್ ಸೂಚನೆಯಂತೆ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ
ತಾಲೂಕಿನ ಪ್ರಮುಖ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರ ಸಭೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನ 11 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಮಂಜುನಾಥ ಸ್ವಾಮಿ ಸಭಾ ಭವನದಲ್ಲಿ ನಡೆಯಿತು. ಕಳೆದ ಕೆಲವು ಸಮಯಗಳಿಂದ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಹಾಗೂ ಇನ್ನಿತರ ಗೊಂದಲಗಳು ನಡೆಯತ್ತಿದ್ದು ಈ ಬಗ್ಗೆ
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಕೆಲವೊಂದು ಸೂಚನೆಗಳನ್ನು ನೀಡಿದ್ದು ಇದಕ್ಕೆ ಪಕ್ಷದ ಮುಖಂಡರು ಸೈ ಎಂದಿದ್ದಾರೆ ಅದಲ್ಲದೆ ಕೆಲವರು ಸಭೆಯಲ್ಲಿ ಅನಾವಶ್ಯಕ ವಿಚಾರಗಳ ಬಗ್ಗೆ ಚರ್ಚಿಸಿದಾಗ ಅವರಿಗೆ ಸರಿಯಾದ ರೀತಿಯಲ್ಲಿ ಕ್ಲಾಸ್ ತಗೊಂಡ ಹರೀಶ್ ಕುಮಾರ್ .ಅವರು
ಹೈ ಕಮಾಂಡ್ ಸೂಚಿಸುವ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ನಾವು ಬದ್ಧರಿರಬೇಕು , ಈಗಾಗಲೇ ಕೆ.ವಸಂತ ಬಂಗೇರ , ಗಂಗಾಧರ್ ಗೌಡ , ರಕ್ಷಿತ್ ಶಿವರಾಂ ಕೆಪಿಸಿಸಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ ಅದಲ್ಲದೇ ಇನ್ಯಾರೋ ಬೇರೆ ಇರಬಹುದು ಹೈಕಮಾಂಡ್ ಯಾರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಾರೋ ಆ ಅಭ್ಯರ್ಥಿಯ ಜೊತೆ ನಿಂತು ಪಕ್ಷಕ್ಕಾಗಿ ಕೆಲಸ ಮಾಡಬೇಕು ಯಾರು ಕೂಡ ಬಣ ರಾಜಕೀಯ ಮಾಡಬಾರದು ಎಂದು ಪಕ್ಷದ ಪ್ರಮುಖ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ .
ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ , ವಾಟ್ಸಾಪ್ ಮುಂತಾದರಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬ್ಲಾಕ್, ಅಭ್ಯರ್ಥಿ , ಕೆಲವು ಲೀಡರ್ ಗಳ ಬಗ್ಗೆ ಕಮೆಂಟ್ ಹಾಕುವುದು ಸುಳ್ಳು ಸುದ್ಧಿ ಹಬ್ಬಿಸುವುದನ್ನು ನಿಲ್ಲಿಸಬೇಕು.ಎಲ್ಲರೂ ಒಗ್ಗಟ್ಟಾಗಿ ಮುಂದಿನ ಚುನಾವಣಾ ಸಿದ್ಧತೆಗಳನ್ನು ಮಾಡಿಕೊಂಡು ಕಾಂಗ್ತೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವತ್ತ ಒಟ್ಟಾಗಿ ಶ್ರಮ ಪಟ್ಟು ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ಪ್ರಮುಖರೊಬ್ಬರು ಹೊರಗಿನಿಂದ ಬಂದವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂಬ ಅಭಿಪ್ರಾಯ ತಿಳಿಸಿದಾಗ ಸಭೆಯಲ್ಲಿ ಮತ್ತೆ ಚರ್ಚೆ ಪ್ರಾರಂಭವಾಯಿತು. .
ಕೊನೆಯಲ್ಲಿ ಪಕ್ಷದ ಮುಖಂಡರಿಗೆ ಸರಿಯಾಗಿ ಸೂಚನೆ ನೀಡಿದ ಜಿಲ್ಲಾಧ್ಯಕ್ಷರು ಬೆಳ್ತಂಗಡಿಯಲ್ಲಿ ಪಕ್ಷದ ಗೊಂದಲವನ್ನು ಬಹುತೇಕ ನಿವಾರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯಲಿದ್ದು ಈ ಸಭೆ ಮುಂದಿನ ದಿನಗಳಲ್ಲಿ ಎಷ್ಟು ಪರಿಣಾಮಕಾರಿಯಾಗಲಿದೆ ಎಂದು ಕಾದು ನೋಡಬೇಕಾಗಿದೆ.
ಸಭೆಯಲ್ಲಿ ಅರ್ಜಿ ಹಾಕಿ ಅಭ್ಯರ್ಥಿಗಳು ಹೊರತು ಪಡಿಸಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿನ್.ಜಿ.ಗೌಡ ಮತ್ತು ನಗರ ಬ್ಲಾಕ್ ಅಧ್ಯಕ್ಷ ಶೈಲೇಶ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.