ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕಿಳಿಯಲಿದ್ದಾರೆ 25 ಸ್ವಾಮೀಜಿಗಳು..!: ಕಾರ್ಕಳ ಅಥವಾ ತೇರದಾಳದಿಂದ ಪ್ರಮೋದ್ ಮುತಾಲಿಕ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ: ಹೊನ್ನಾವರದಲ್ಲಿ ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸ್ಪಷ್ಟನೆ..!

ಹೊನ್ನಾವರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಅಥವಾ ತೇರದಾಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ.

ಡಿ.18 ರಂದು ಹೊನ್ನಾವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಾಮಸೇನೆ ವತಿಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳ ಹಾಗೂ ಹಳಿಯಾಳ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದರು

error: Content is protected !!