ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಘೋಷಿಸಿದ ಜಾರ್ಖಂಡ್..!: ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಜೈನ ಧರ್ಮೀಯರಿಂದ ವಿರೋಧ..!:ಪ್ರವಾಸಿ ಸ್ಥಳಗಳ ಪಟ್ಟಿಯಿಂದ ಕೈಬಿಡಲು ರಾಜ್ಯಸಭಾ ಸದಸ್ಯ, ಡಾ. ಡಿ.ವೀರೇಂದ್ರ ಹೆಗ್ಗಡೆ ಒತ್ತಾಯ

ಹೊಸದಿಲ್ಲಿ : ಜಾರ್ಖಂಡ್‌ನ ಗಿರಿಡಿ ಜಿಲ್ಲೆಯ ಜೈನ ಸಮುದಾಯದ ಪವಿತ್ರ ಸ್ಥಳವಾದ ಶ್ರೀಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ಸ್ಥಳವೆಂದು ಜಾರ್ಖಂಡ್ ಸರ್ಕಾರ ಪರಿಗಣಿಸಿದ್ದು ಇದನ್ನು ಕೈಬಿಡಬೇಕೆಂದು ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೇಂದ್ರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಒತ್ತಾಯಿಸಿದರು.


ಇದಕ್ಕೆ ಸ್ಪಂದಿಸಿದ ಸಚಿವರು, ನಾನು ಈಗಾಗಲೇ ಲೋಕ ಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವುದಾಗಿ ಮತ್ತು ತಮ್ಮ ಕೋರಿಕೆಯ ಮೇರೆಗೆ ತಕ್ಷಣ ಜಾರ್ಖಂಡ್ ಮುಖ್ಯಮಂತ್ರಿಯವರಿಗೆ ಮತ್ತೊಂದು ಪತ್ರವನ್ನು ಬರೆದು ಸಮ್ಮೇದ ಶಿಖರ್ಜಿಯ ಪಾವಿತ್ರ‍್ಯತೆಯನ್ನು ಉಳಿಸುವಂತೆ ಮತ್ತು ಪ್ರವಾಸಿ ತಾಣ ಎಂಬುದನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

error: Content is protected !!