ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ.!: ಸವಾರ ಸಾವು: ಕಾಶಿಬೆಟ್ಟು ಸಮೀಪ ಘಟನೆ..!

 

 

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ರಂದು ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿಯಾಗಿದೆ.‌ ಈ ವೇಳೆ ಸವಾರ ರಸ್ತೆಗೆಸೆಯಲ್ಪಟ್ಟು
ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪುರುಷೋತ್ತಮ ಪೂಜಾರಿ(20) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

 

error: Content is protected !!