ಬೆಳ್ತಂಗಡಿ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಉಜಿರೆಯಲ್ಲಿ ಡಿ 26 ಬೆಳಿಗ್ಗೆ ನಡೆದಿದೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಉಜಿರೆ ಗ್ರಾಮದ ಪೆರ್ಲದ ದರ್ಖಾಸ್ ಮನೆಯ ಉಮಾ (25) ಎಂದು ಗುರುತಿಸಲಾಗಿದೆ. ಉಮಾ ಅವರು ಉಜಿರೆಯ ಅಂಗಡಿಯೊಂದರಲ್ಲಿ ಕೆಲಸದಲ್ಲಿದ್ದರು ಎಂದು ತಿಳಿದು ಬಂದಿದೆ.