ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸರಕಾರಿ‌ ಬಸ್ ಮುಖಾ‌-ಮುಖಿ ಡಿಕ್ಕಿ..!:ನಿಡ್ಲೆ ಬೂಡುಜಾಲು ಸಮೀಪ ಘಟನೆ..!:ಗಂಭೀರ ಗಾಯಗೊಂಡ ಬಸ್ ಚಾಲಕರು: ಪ್ರಾಣಾಪಾಯದಿಂದ ಮಕ್ಕಳು ‌ಪಾರು..!

ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಡಿ. 27ರಂದು ಮಧ್ಯಾಹ್ನ ಸಂಭವಿಸಿದೆ.

ಸಿಂದನೂರಿನ ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸುಬ್ರಹ್ಮಣ್ಯ ದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಮುಖಾ-ಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಎರಡೂ ಬಸ್ಸಿನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ವಾಹನದಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆಯ ಕುರಿತಾದ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ .

error: Content is protected !!