ಬೆಳ್ತಂಗಡಿ ಮೂಲದ ಇಬ್ಬರು ಅರೆಸ್ಟ್ : ಕೋಟ್ಯಾಂತರ ಮೌಲ್ಯದ ತಿಮಿ‌ಂಗಿಲ ವಾಂತಿ ಮಾರಾಟ ಯತ್ನ: ಸಿಸಿಬಿ ಅಧಿಕಾರಿಗಳಿಂದ ಕಾರ್ಯಾಚರಣೆ

ಮಂಗಳೂರು: ಕೋಟ್ಯಾಂತರ ರೂಪಾಯಿ ಮೌಲ್ಯದ ಆಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಡ್ಯಾರು ನಿವಾಸಿ ನಿಮಿತ್(26) ಹಾಗೂ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಯೋಗೀಶ್ ಪೂಜಾರಿ (41) ಎಂಬವರು ಮಂಗಳೂರು ನಗರದ ಲಾಲ್ ಭಾಗ್ ನ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಾಂತರ ರೂ. ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್-ಗ್ರೀಸ್(ತಿಮಿಂಗಿಲ ವಾಂತಿ) ನ್ನು ವಶದಲ್ಲಿಟ್ಟು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತ್ರತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.
ಆರೋಪಿಗಳಿಂದ 3.2 ಕೆಜಿ ತೂಕದ ತಿಮಿಂಗಿಲ ವಾಂತಿನ್ನು ಹಾಗೂ 2 ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ಪಿಎಸ್ಐ ಯವರಾದ ರಾಜೇಂದ್ರ ಬಿ., ಸುದೀಪ್ ಎಂ. ವಿ. ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

error: Content is protected !!