ನೇತ್ರಾವತಿ ಸೇತುವೆ ಮೇಲಿಂದ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸ್ಥಳೀಯರಿಂದ ರಕ್ಷಣೆ: ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜ.24 ರಂದು ಸಂಜೆ ನಡೆದಿದೆ.

ಮೈಸೂರು ಜಿಲ್ಲೆಯ ಲಕ್ವಾಲ್ಲಿ ಮೂಲದ ಮಂಜು(52) ಎಂಬವರು ಪತ್ನಿ ಮತ್ತು ಮಕ್ಕಳ ಜೊತೆ ಹತ್ತು ದಿನದ ಹಿಂದೆ ಮನೆಯಲ್ಲಿ ಜಗಳ ಮಾಡಿ ಮನೆ ಬಿಟ್ಟು ಹೋಗಿದ್ದು ಬಳಿಕ ಧರ್ಮಸ್ಥಳದ ಕನ್ಯಾಡಿಯಲ್ಲಿ ಕೂಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಆದರೆ ಮಾನಸಿಕವಾಗಿ ನೊಂದಿದ್ದ ಮಂಜು ನೇತ್ರಾವತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ತಕ್ಷಣ ಸ್ಥಳೀಯರು ನೀರಿಗೆ ಹಾರಿ ರಕ್ಷಣೆ ಮಾಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

error: Content is protected !!