ಜಯಾನಂದ ಪಿಲಿಕಳ ಅವಮಾನ ಪ್ರಕರಣ: ಬೆಳ್ತಂಗಡಿ ಶಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹ: ಜ.30ರಂದು ವಿವಿಧ ಸಂಘಟನೆಗಳಿಂದ ಬೆಳ್ತಂಗಡಿ ಪೊಲೀಸ್ ಠಾಣಾ ಮುಂಭಾಗದಲ್ಲಿ ಪ್ರತಿಭಟನೆ

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರು ಮಲೆಕುಡಿಯ ಸಮುದಾಯದ ಮುಖಂಡ ಜಯಾನಂದ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಜ30 ಸೋಮವಾರದಂದು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಯಲಿದೆ ಎಂದು ಶೇಖರ್ ಲಾಯಿಲ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಯಾನಂದ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿ ಅವರ ಮೇಲೆ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿ ದೌರ್ಜನ್ಯವೆಸಗಿದ್ದು ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ನಡೆದಿರುವ ಅವಮಾನವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾದ್ಯವಿಲ್ಲ. ಶಾಸಕರು ಸರ್ವಾಧಿಕಾರಿ ನೀತಿಯನ್ನು ಅನುಸರಿಸುತ್ತಿದ್ದಾರೆ, ಘನತೆಯಿಂದ ಬದುಕಲು ಆಗದಂತಹ ಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಶಾಸಕರ ದೌರ್ಜನ್ಯದ ವಿರುದ್ದ ಕೂಡಲೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕು. ಶಾಸಕರು ನಡೆಸುತ್ತಿರುವ ಈ ದೌರ್ಜನ್ಯ ದಬ್ಬಾಳಿಕೆಯ ವಿರುದ್ದ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಸಂಘ ಸಮಿತಿ ಅಂಬೇಡ್ಕರ್ ವಾದ ನೇತೃತ್ವದಲ್ಲಿ ತಾಲೂಕಿನ ಮಲೆಕುಡಿಯ ಸಮುದಾಯದ ಭಾಗವಹಿಸುವಿಕೆಯಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ  ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.

error: Content is protected !!