ಬೆಳ್ತಂಗಡಿ, ಪೊಲೀಸ್ ನಿರೀಕ್ಷಕರಾಗಿ ಸತ್ಯನಾರಾಯಣ.ಕೆ ಅಧಿಕಾರ ಸ್ವೀಕಾರ

 

 

 

 

ಬೆಳ್ತಂಗಡಿ : ಮೇಲ್ದರ್ಜೆಗೇರಿಸಲಾದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಅಗಿ ಸತ್ಯನಾರಾಯಣ.ಕೆ ಅವರು ಫೇ.5 ರಂದು(ಇಂದು) ಅಧಿಕಾರ ಸ್ವೀಕರಿಸಿಕೊಂಡರು.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೊದಲು ಇನ್ಸ್ಪೆಕ್ಟರ್ ಅಗಿ ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಆನಂದ್. ಎಸ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ತಕ್ಷಣ ಆನಂದ್ ಅವರ ಬದಲಿಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂತೋಷ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿತ್ತು. ಮತ್ತೆ ಶನಿವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತ್ಯನಾರಾಯಣ.ಕೆ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಅಗಿ ನೇಮಕ ಮಾಡಲಾಗಿದೆ. ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಂದ ಫೇ. 5 ರಂದು ಅಧಿಕಾರ ಸ್ವೀಕರಿಸಿಕೊಂಡು ಕರ್ತವ್ಯಕ್ಕೆ ಹಾಜರಾದರು.ಚಿಕ್ಕಮಗಳೂರು ಜಿಲ್ಲೆಯ ಅಲ್ದೂರು ಸರ್ಕಲ್ ಇನ್ಸ್ಪೆಕ್ಟರ್ ಅಗಿ ಕರ್ತವ್ಯ ಮಾಡುತ್ತಿದ್ದ ಇವರು

ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಗಿ  ಕರ್ತವ್ಯ ನಿರ್ವಹಿಸಲಿದ್ದಾರೆ.

error: Content is protected !!