ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳ:ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಕಳ್ಳತನ ಪ್ರಕರಣ ಸಂಬಂಧ ಎರಡು ವರ್ಷಗಳಿಂದ ಕೋರ್ಟ್‌ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 91/2013 ರಲ್ಲಿ ಐಪಿಸಿ 147.148.149.323.506.324 ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯಾದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಬರಮೇಲು ನಿವಾಸಿ ಸಿದ್ದಪ್ಪ ಎಂಬವರ ಪುತ್ರ ವಿನಯ್(40) ಎಂಬುವನ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಫೆ.9 ರಂದು ಬೆಳಿಗ್ಗೆ 7.30 ಗಂಟೆಗೆ ಧರ್ಮಸ್ಥಳ ಬಸ್ಸು ನಿಲ್ದಾಣದ ಬಳಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್.ಡಿ ನೇತೃತ್ವದ ತಂಡದ ಸಿಬ್ಬಂದಿಗಳಾದ ರಾಜೇಶ್ ಮತ್ತು ಮಲ್ಲಿಕಾರ್ಜುನ್ ರವರು ಬಂಧಿಸಿದ್ದಾರೆ.

ಆರೋಪಿ ವಿನಯ್ ನನ್ನು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಫೆ.9 ರಂದು ಹಾಜರು ಪಡಿಸಿದ್ದು ನ್ಯಾಯಾಲಯವು ಫೆ. 22 ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಆರೋಪಿ ಉಪ್ಪಿನಂಗಡಿ ಪೊಲೀಸ್ ಠಾಣೆ ಕಳ್ಳತನ ಪ್ರಕರಣ ಒಂದರಲ್ಲಿ ಮುಖ್ಯ ಆರೋಪಿಯಾಗಿದ್ದಾನೆ.

error: Content is protected !!