ಪುತ್ತೂರು ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ..!: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು 50 ಅಡಿ ಆಳಕ್ಕೆ ಉರುಳಿಬಿದ್ದ ಕಾರು..!

ಪುತ್ತೂರು: ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ. ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು , ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.

ಘಟನೆಯಲ್ಲಿ ನಿಡ್ಪಳ್ಳಿಯ ದಿ.ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ (35) ಮೃತಪಟ್ಟಿದ್ದಾರೆ. ಇವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು. ಕಾರು ಬೆಟ್ಟಂಪಾಡಿ ಕಡೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಎರಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಬಿದ್ದಿದೆ. ಕೂಡಲೇ ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮುರಳಿಧರ್ ಭಟ್ ಮುಂಡೂರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!