ಕರ್ನಾಟಕ ರಾಜ್ಯ ಬಜೆಟ್ ಮಂಡನೆ – 2023:  ವಿದ್ಯಾವಂತ ನಿರುದ್ಯೋಗಿಗಳಿಗೆ ಮಾಸಿಕ ಸಹಾಯ ಧನ ಘೋಷಣೆ..!: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಧನ

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರೈತರಿಗೆ, ಮಹಿಳೆಯರಿಗೆ, ಸೇರಿದಂತೆ ಅನೇಕರಿಗೆ ವಿವಿಧ ರೀತಿಯ ಯೋಜನೆಗಳ ಬಜೆಟ್ ಮಂಡಿಸಿದ್ದು ಇದರ ಜೊತೆಗೆ ವಿದ್ಯಾವಂತ ನಿರುದ್ಯೋಗಿಗಳಿಗೆ ಮಾಸಿಕ ಸಹಾಯ ಧನ ಘೋಷಣೆ ಮಾಡಿದ್ದಾರೆ.

ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ಸಿಗದೇ ಇದ್ದರೆ ‘ಯುವಸ್ನೇಹಿ’ ಎಂಬ ಹೊಸ ಯೋಜನೆಯಡಿ ಮಾಸಿಕ 2,000 ರೂ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. ಆದರೆ ಒಂದು ಬಾರಿ ಮಾತ್ರ ಆರ್ಥಿಕ ನೆರವು ಸಿಗಲಿದೆ. ಜೊತೆಗೆ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

error: Content is protected !!