ಧರ್ಮಸ್ಥಳ: ನಿಯಂತ್ರಣ ತಪ್ಪಿದ ಜೀಪ್ ಪಲ್ಟಿ..! : ಚಿಕಿತ್ಸೆ ಫಲಿಸದೆ ಬೆಂಗಳೂರಿನ ವ್ಯಕ್ತಿ ಸಾವು

ಬೆಳ್ತಂಗಡಿ : ನಿಯಂತ್ರಣ ತಪ್ಪಿದ ಥಾರ್ ಜೀಪೊಂದು ನದಿಯ ಪಕ್ಕದ ಹೊಂಡಕ್ಕೆ ಪಲ್ಟಿಯಾಗಿ ಬಿದ್ದು, ಈ ವೇಳೆ ಗಂಭಿರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಸಮೀಪದ ಕುದ್ರಾಯ ಎಂಬಲ್ಲಿ ಫೆ.11 ರಂದು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಥಾರ್ ಜೀಪ್ ಬೆಳಿಗ್ಗೆ 5.30 ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ನದಿಯ ಬದಿಯ ಹೊಂಡಕ್ಕೆ ಬಿದ್ದಿತ್ತು.

ಈ ಸಂದರ್ಭದಲ್ಲಿ ಬೆಂಗಳೂರು ಹೊಸಕೋಟೆಯ ಅನ್ನಪೂರ್ಣೇಶ್ವರಿ ನಗರದ ಅರುಣ್ ಕುಮಾರ್ ಕೆ. ಎಸ್ (31), ಪತ್ನಿ ನಂದಿನಿ ಎಂ (24) ಹಾಗೂ ಚಂದ್ರಶೇಖರ್ ವಾಹನದಲ್ಲಿದ್ದು, ಅರುಣ್ ಕುಮಾರ್ ಕುತ್ತಿಗೆಗೆ ಗಂಭೀರ ಗಾಯವಾಗಿತ್ತು. ಇವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಮೇಲೆ ಅಜಾಗರೂಕತೆ ಚಾಲನೆಯಿಂದ ಅಪಘಾತ ಪ್ರಕರಣ ದಾಖಲಾಗಿದೆ.

error: Content is protected !!