ಭಟ್ಕಳದಲ್ಲಿ ನಡೆಯಿತು ಮನ ಕಲಕುವ ಭೀಕರ ಘಟನೆ, ಒಂದೇ ಕುಟುಂಬದ ನಾಲ್ವರ ಹತ್ಯೆ: ಬದುಕುಳಿದವು ಮಲಗಿದ್ದ ಎರಡು ಕಂದಮ್ಮಗಳು, ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಶವಗಳು: ಆಸ್ತಿ ಪಾಲು ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ, ಹಾಡವಳ್ಳಿಯ ಓಣಿಬಾಗಿಲು ಬಳಿ ದುರ್ಘಟನೆ..!

ಕಾರವಾರ: ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಓಣಿಬಾಗಿಲು ಗ್ರಾಮದಲ್ಲಿ ಫೆ.24ರಂದು ನಡೆದಿದೆ.

ಶಂಭು ಹೆಗಡೆ (65), ಅವರ ಪತ್ನಿ ಮಾದೇವಿ ಹೆಗಡೆ (60), ಅವರ ಮಗ ರಾಜೀವ್ ಹೆಗಡೆ (34) ಹಾಗೂ ಸೊಸೆ ಕುಸುಮಾ ಭಟ್(30) ಕೊಲೆಯಾದವರಾಗಿದ್ದಾರೆ.

ಕಳೆದ ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಆದರೆ ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆದರೆ ಈ ವೇಳೆ ಮನೆಯೊಳಗೆ ಮಲಗಿದ್ದ ಮಗು ಹಾಗೂ ಪಕ್ಕದ ಮನೆಯಲ್ಲಿದ್ದ ಇನ್ನೊಂದು ಮಗು ಕೊಲೆಗಡುಕರಿಂದ ಪಾರಾಗಿವೆ.

ಈಗಾಗಲೇ ಕೊಲೆಯ ಪ್ರಮುಖ ಆರೋಪಿಯನ್ನ ಬಂಧಿಸಲಾಗಿದ್ದು, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಮನೆಯ ಆವರಣದಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭೀಕರ ದೃಶ್ಯ ಕಂಡುಬಂತು. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

error: Content is protected !!