ಸರ್ಕಾರಿ ನೌಕರರ ಮುಷ್ಕರದ‌ ಮಧ್ಯೆ ರಾಜ್ಯದಿಂದ ಮಹತ್ವದ ಆದೇಶ..!: ಸರ್ಕಾರದ ನಿರ್ಧಾರವನ್ನು ಸ್ಪಷ್ಟಪಡಿಸಿದ ಸಿಎಂ: ಮುಷ್ಕರ ವಾಪಾಸ್ ಪಡೆದ ನೌಕರರು

ಬೆಂಗಳೂರು: ಸರ್ಕಾರಿ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರದ ಮಣಿದಿದ್ದು ಮಹತ್ವದ ಆದೇಶ ಹೊರಡಿಸಿದೆ.

ಏಳನೇ ವೇತನ ಆಯೋಗಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಇಂದಿನಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದ್ದು ಸರ್ಕಾರಿ ನೌಕರರಿಗೆ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದ್ದಲ್ಲದೆ, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಬೇಡಿಕೆ ಕುರಿತು ಸಮಿತಿ ರಚಿಸಿ ವರದಿ ಪಡೆದ ನಂತರ ತೀರ್ಮಾನಿಸುವುದಾಗಿಯೂ ಹೇಳಿದೆ.

ನೌಕರರ‌ ಮುಷ್ಕರದ ಬಗ್ಗೆ ಮಾಹಿತಿ ಪಡೆದಿದ್ದ ಸಿಎಂ
ರೇಸ್ ಕೋರ್ಸ್ ರಸ್ತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಈ ನಿರ್ಧಾರ ಕೈಗೊಂಡಿದ್ದಾರೆ. ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹಾಗೂ ಸಿಎಂ ಮಾತನಾಡಿ ನಿರ್ಧಾರಗಳ‌‌ ಬಗ್ಗೆ ಚರ್ಚಿಸಿ ಸಂದಾನ ಮಾಡಿಕೊಂಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ನಿನ್ನೆ ಸರ್ಕಾರಿ ನೌಕರರ ಜೊತೆ ಚರ್ಚೆ ನಡೆಸಿದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿ, ಈ ಒಪ್ಪಂದಕ್ಕೆ ಬಂದಿದ್ದೇವೆ. ಸರ್ಕಾರಿ ನೌಕರರಿಗೆ ಶೇ. 17ರ ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದೇವೆ. ಈಗಲೇ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಹಾಗಾಗಿ ಸರ್ಕಾರಿ ನೌಕರರು ಮುಷ್ಕರ ಕೈಬಿಡುತ್ತಾರೆ ಎನ್ನುವ ವಿಶ್ವಾಸ ಇದೆ. ಮತ್ತೊಂದು ಬೇಡಿಕೆಯಾದ ಎನ್​ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಮಾಡುತ್ತೇವೆ, ಬಳಿಕ ನಿರ್ಣಯ ಕೈಗೊಳ್ಳಲಾಗುತ್ತದೆ. ಬೇರೆ ರಾಜ್ಯಗಳಲ್ಲಿ ಎನ್​ಪಿಎಸ್ ಏನು ಆಗಿದೆ ಎಂದು ವರದಿ ತರಿಸಿಕೊಳ್ಳುತ್ತೇವೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರಿಸಿಕೊಳ್ಳುತ್ತೇವೆ. ಅವರು ಬೇರೆ ರಾಜ್ಯದಲ್ಲಿನ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿ ವರದಿ ನೀಡಲಿದ್ದಾರೆ. ಅದರ ಆಧಾರದಲ್ಲಿ ಸರ್ಕಾರಿ ಎನ್​ಪಿಎಸ್ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಯವರ ನಿರ್ಧಾರದ ಬಳಿಕ ವೇತನ ಹೆಚ್ವಳ ಪ್ರಮಾಣವನ್ನು ಶೇ.20 ರಷ್ಟು ಹೆಚ್ಚಿಸುವಂತೆ ಸರ್ಕಾರಿ‌ ನೌಕರರ ಸಂಘ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಮನವಿ ಮಾಡಿದೆ.

 

error: Content is protected !!