4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: ಬೆಳ್ತಂಗಡಿ ಪೊಲೀಸರಿಂದ ಕಾರ್ಯಾಚರಣೆ

ಬೆಳ್ತಂಗಡಿ : ಅಪಘಾತ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಗಣೇಶ್(48) ಎಂಬಾತ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 01/2014 ಕಲಂ. 279,304 (ಎ ) ಐಪಿಸಿಯ ಅಪಘಾತ ಪ್ರಕರಣದಲ್ಲಿ ಸುಮಾರು 4 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ. ಈತನನ್ನು ಮಾರ್ಚ್ 6 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತ್ಯನಾರಾಯಣ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಹರೀಶ್ ಮತ್ತು ಸಬ್ ಇನ್ಸ್ಪೆಕ್ಟರ್ ಅರ್ಜುನ್ ನೇತೃತ್ವದ ಸಿಬ್ಬಂದಿಗಳಾದ ವೃಷಭ, ಬಸವರಾಜ್, ದರೇಶ್ ರವರು ಚಿಕ್ಕಮಗಳೂರ್ ಜಿಲ್ಲೆ ಮೂಡಿಗೆರೆಯಿಂದ ದಸ್ತಗಿರಿ ಮಾಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆದರೆ ನ್ಯಾಯಾಲಯವು ಜಾಮೀನಿನಲ್ಲಿ ಬಿಡುಗಡೆ ಮಾಡಿದೆ.

error: Content is protected !!