ಪರೀಕ್ಷೆಯೇ ಜೀವನವಲ್ಲ, ದುಡುಕದಿರಿ ಪಿಯು ವಿದ್ಯಾರ್ಥಿಗಳೇ:  ಪರೀಕ್ಷೆ ಎದುರಿಸಬೇಕಿದ್ದ ವಿದ್ಯಾರ್ಥಿನಿಯ ಜೀವನ ದುರಂತ ಅಂತ್ಯ: ಪರೀಕ್ಷಾ ತಯಾರಿಯಲ್ಲಿದ್ದ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ, ಕಾರಣ ನಿಗೂಢ

 

 

 

ಬಂಟ್ವಾಳ: ನಾಳೆ ಪರೀಕ್ಷೆ ಬರೆಯಬೇಕಿದ್ದ ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ತನ್ನ ಜೀವನಕ್ಕೆ ದುರಂತ ಅಂತ್ಯ ಕಂಡುಕೊಂಡ ಘಟನೆ ಗುರುವಾರ ಬೆಳಗ್ಗೆ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ನಡೆದಿದೆ.
ಈಕೆ ಕಲ್ಲಡ್ಕದ ಖಾಸಗ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವೈಷ್ಣವಿ (17) ಸಾವನ್ನಪ್ಪಿದ ಬಾಲಕಿ.
ಶಿಕ್ಷಕ ದಂಪತಿ ಚಂದ್ರಶೇಖರ ಮತ್ತು ಸೌಮ್ಯಾ ಅವರ ಮೂವರು ಮಕ್ಕಳಲ್ಲಿ ಪ್ರಥಮ ‌ಪುತ್ರಿಯಾಗಿದ್ದು, ವೈಷ್ಣವಿ ಬೆಳಗ್ಗೆ ಸುಮಾರು 10 ಗಂಟೆಯ ಆಸುಪಾಸಿನಲ್ಲಿ ಈ ಕೃತ್ಯವೆಸಗಿದ್ದಾಗಿ ಸಂಶಯಿಸಲಾಗಿದೆ. ದಿಢೀರನೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಇನ್ನೂ ಪತ್ತೆಯಾಗಿಲ್ಲ.
ಮೃತರಿಗೆ ಇಬ್ಬರು ಸಹೋದರಿಯರಿದ್ದಾರೆ.
ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ, ಪಿಯುನಲ್ಲಿ ಕಾಮರ್ಸ್ ಕಲಿಯುತ್ತಿದ್ದು, ನಾಳೆ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಯ ಸಿದ್ಧತೆಯಲ್ಲಿದ್ದ ವೈಷ್ಣವಿ ಬೆಳಗ್ಗೆ ತಾಯಿ ಜೊತೆ ಶಾಲೆಗೆ ಹೋಗಿ ಮರಳಿದ್ದಳು. ಎಂದಿನಂತೆ ತಾಯಿ ಮಗಳಿಗೆ ಕರೆ ಮಾಡಿದ್ದು, ಹಲವು ಕರೆಗಳಾದರೂ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ನೆರೆಮನೆಯವರಿಗೆ ತಾಯಿ ಕರೆ ಮಾಡಿದ್ದಾರೆ. ನೆರೆಮನೆಯವರು ಮನೆಗೆ ತೆರಳಿದಾಗ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು, ಬಾಲಕಿಯನ್ನು ಕಲ್ಲಡ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

error: Content is protected !!