ಪಿಲಿಪಂಜರ ಕ್ಷೇತ್ರದಲ್ಲಿ ಮಾ. 30 ಮತ್ತು 31ರಂದು ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ: ಶರತ್ ಕೃಷ್ಣ ಪಡುವೆಟ್ನಾಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಿಲಿಪಂಜರ ಕ್ಷೇತ್ರದ ಶ್ರೀ ಉಳ್ಳಾಲ್ತಿ, ಮೈಸಂದಾಯ, ಪಂಜುರ್ಲಿ, ಹಾಗೂ ಗುಳಿಗ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾ. 30 ಮತ್ತು 31 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಮಾ.10ರಂದು ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಬಿಡುಗಡೆಯಾಗಿದೆ.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪ ಆರ್ ಶೆಟ್ಟಿ ಹಾಗೂ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

error: Content is protected !!