ರಾಜ್ಯದಲ್ಲಿ ಅರ್ಥಶಾಸ್ತ್ರ ಪರೀಕ್ಷೆಗೆ 24,305 ವಿದ್ಯಾರ್ಥಿಗಳು ಗೈರು..!: ಹಿಜಾಬ್ ಗೊಂದಲಕ್ಕೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು ಮಾ 13ರಂದು ನಡೆದ ಅರ್ಥಶಾಸ್ತ್ರ ಪರೀಕ್ಷೆಗೆ ಒಟ್ಟು 24,305 ವಿದ್ಯಾರ್ಥಿಗಳು ಗೈರಾಗಿದ್ದಾರೆ.

32 ಜಿಲ್ಲೆಗಳಿಂದ ಒಟ್ಟು 4,19,887 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ ಅರ್ಥಶಾಸ್ತç ಪರೀಕ್ಷೆಗೆ 3,95,582 ವಿದ್ಯಾರ್ಥಿಗಳು ಹಾಜರಾಗಿದ್ದರು. ಆದರೆ 24,305 ವಿದ್ಯಾರ್ಥಿಗಳು ಗೈರಾಗಿದ್ದು ಶೇ.94.21ರಷ್ಟು ಹಾಜರಾತಿ ಇತ್ತು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ದ.ಕ ಜಿಲ್ಲೆಯಲ್ಲಿ 18095 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಅದರಲ್ಲಿ 17,812 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ 283 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ಗೊಂದಲಗಳಿದ್ದರೂ ಈವರೆಗೆ ಎಲ್ಲಿಯೂ ಅಹಿತಕರ ಘಟನೆ ನಡೆದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾದ ಮಲ್ಲೇಶ್ವರ ಕಾಲೇಜಿನ ವಿದ್ಯಾರ್ಥಿನಿಯನ್ನು ಹೊರತುಪಡಿಸಿದರೆ ಬೇರೆ ಎಲ್ಲಿಯೂ ಹಿಜಾಬ್ ವಿಚಾರವಾಗಿ ಗೊಂದಲ ಸೃಷ್ಟಿ ಆಗಿಲ್ಲ. ಶಿಕ್ಷಕರು ವಿದ್ಯಾರ್ಥಿನಿಯ ಮನವೊಲಿಸಿ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಸದ್ಯ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಅತ್ಯಂತ ಶಾಂತಿಯುತವಾಗಿ ನಡೆಯುತ್ತಿದೆ.

error: Content is protected !!