ಮಾನವೀಯ ಲೇಖನಕ್ಕೆ ಒಲಿದ ‘ ಮೈಸೂರು ದಿಗಂತ’ ಪ್ರಶಸ್ತಿ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದೀಶ್ ಮರೋಡಿಯವರಿಗೆ ಪ್ರದಾನ: ಮಲೆಮಕ್ಕಳ ಅಳಲಿಗೆ ಧ್ವನಿಯಾದ ಪತ್ರಕರ್ತನಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತ ‘ಮೈಸೂರು ದಿಗಂತ’ ಪ್ರಶಸ್ತಿಯು ಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಒಲಿದು ಬಂದಿದ್ದು, ಮಾ.13ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಮಾಧ್ಯಮ  ಕ್ಷೇತ್ರದಲ್ಲಿ ಒಂದೂವರೆ ದಶಕದಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರದೀಶ್ ಮರೋಡಿ ಅವರು ಬೆಳ್ತಂಗಡಿಯ ಸುದ್ದಿಬಿಡುಗಡೆ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದವರು. ಬಳಿಕ ಕೆಲವು ವರ್ಷ ಟಿವಿ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿ, ಬಳಿಕ 2013ರಿಂದ ಪ್ರಜಾವಾಣಿ ಪತ್ರಿಕೆಯಲ್ಲಿ ಮೈಸೂರಿನಲ್ಲಿ ಸೇವೆಸಲ್ಲಿಸಿ, ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ ಶೆಣೈ, ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್, ವಿಆರ್ ಎಲ್ ಸಮೂಹದ ಮುಖ್ಯಸ್ಥ ವಿಜಯ ಸಂಕೇಶ್ವರ, ಅಕಾಡಿಮಿ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

error: Content is protected !!