ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಮತ್ತೊಂದು ಗೌರವದ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಈ ರೈಲು ನಿಲ್ದಾಣದ 1,507 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ವಿಶ್ವದ ಅತಿ ಉದ್ದನೆಯ ರೈಲ್ವೆ ಫ್ಲಾಟ್‌ಫಾರ್ಮ್ ಇದಾಗಿದೆ.
ಮಾರ್ಚ್ 12ರಂದು ಧಾರವಾಡದಲ್ಲಿ ಏರ್ಪಡಿಸಲಾಗಿದ್ದ ಐಐಟಿ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಪ್ಲಾಟ್‌ಫಾರ್ಮ್ನಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಇಂಜಿನ್ ಅಳವಡಿಸಿದ್ದ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ಮತ್ತು ಬೆಳಗಾವಿ-ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲುಗಳಿಗೂ ಹಸಿರು ನಿಶಾನೆ ತೋರಿಸಿದ್ದರು.