ಬೆಳ್ತಂಗಡಿ : ವಿಧಾನಸಭಾ ಚುನಾವಣೆ-2023ರ ಪೂರ್ವ ತಯಾರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಎಸ್ಪಿ ವಿಕ್ರಮ್ ಅಮಟೆಯವರು ಮಾ.19ರಂದು ಬೆಳ್ತಂಗಡಿಗೆ ಆಗಮಿಸಿ ಚೆಕ್‌ಪೋಸ್ಟ್ ಗಳನ್ನು ಪರಿಶೀಲನೆ ನಡೆಸಿದ್ದಾರೆ.
ಚಾರ್ಮಾಡಿ ಚೆಕ್ ಪೋಸ್ಟ್ , ಕೊಕ್ಕಡ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪೊಲೀಸರ ಜೊತೆ ಸಭೆ ನಡೆಸಿ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು. ಬಳಿಕ ಚಾರ್ಮಾಡಿ ಗ್ರಾಮ ಪಂಚಾಯತ್ ಕಟ್ಟಡದ ಸಭಾಂಗಣದಲ್ಲಿ ಸಾರ್ವಜನಿಕರ ಜೊತೆ ಚುನಾವಣೆಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಸಿದರು. ಪರಿಶೀಲನೆ ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಾಲೂಕಿನ ಪೊಲೀಸರ ಜೊತೆ ಚುನಾವಣೆಯ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು , ಚೆಕ್ ಪೊಸ್ಟ್ ಗಳಲ್ಲಿ ಯಾವ ರೀತಿಯಲ್ಲಿ ತಪಾಸಣೆ ನಡೆಸಬೇಕು ಎಂಬ ಬಗ್ಗೆ ಸಭೆ ನಡೆಸಿದರು.
ಚೆಕ್ ಪೋಸ್ಟ್ ಭೇಟಿ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸತ್ಯನಾರಾಯಣ, ಧರ್ಮಸ್ಥಳ, ವೇಣೂರು, ಪುಂಜಾಲಕಟ್ಟೆ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ , ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಹಾಗೂ ಸಿಬ್ಬಂದಿಗಳು ಜೊತೆಯಲ್ಲಿದ್ದರು.