ಕಡಬ: ರೆಂಜಿಲಾಡಿ ಮೀನಾಡಿ ಸಮೀಪದ ನೈಲ ಎಂಬಲ್ಲಿ ಅರಣ್ಯ ಇಲಾಖಾಧಿಕಾರಿಗಳು ಹಾಗೂ ಪೊಲೀಸರು ಇಬ್ಬರನ್ನು ಬಲಿದ ಕಾಡಾನೆಯನ್ನು ಸೆರೆಹಿಡಿಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿ ಬಂಧಿತರಾಗಿದ್ದ 7 ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಉಮೇಶ್ ಕಮರ್ಕಜೆ, ರಾಜೇಶ್ ಕನಡ ಕಮರ್ಕಜೆ, ಜನಾರ್ಧನ ರೈ ಕೊಲ್ಯ, ಕೋಕಿಲ ಕಮರ್ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿ ಬಾಗಿಲು ಮತ್ತು ಅಜಿತ್ ಕುಮಾರ್ ರೆಂಜಾಳ ಈ 7 ಮಂದಿ ನ್ಯಾಯಾಂಗ ಬಂಧನದಲ್ಲಿದ್ದು, ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ವಕೀಲ ಮಹೇಶ್ ಕಜೆ ಅವರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನಡೆಸಿದ ಜಿಲ್ಲಾ ನ್ಯಾಯಾಲಯವು ಈ ಎಲ್ಲಾ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ.