ನವದೆಹಲಿ: ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗಳೊಂದಿಗೆ ಲಿಂಕ್ ಮಾಡಲು 2023ರ ಏಪ್ರಿಲ್ 1ರಂದು ಕೊನೆಯ ದಿನ ಆಗಿತ್ತು. ಸದ್ಯ ಈ ಗಡುವನ್ನು ವಿಸ್ತರಿಸಿ ಕಾನೂನೂ ಮತ್ತು ನ್ಯಾಯಸಚಿವಾಲಯ 2024ರ ಮಾರ್ಚ್ 31 ರವರೆಗೆ ಅವಕಾಶ ನೀಡಿ ಆದೇಶಿಸಿದೆ.
ನೋಂದಾಯಿತ ಮತದಾರರು ತಮ್ಮ ವೋಟರ್ ಐಡಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಅಭಿಯಾನವನ್ನು ಆರಂಭಿಸಿದ್ದು, ಈ ಮೂಲಕ ಪ್ರಮುಖವಾಗಿ ನಕಲಿ ಮತದಾನವನ್ನು ತಡೆಯಲು ಸಾಧ್ಯವಾಗಲಿದೆ. ಮತಗಟ್ಟೆ ಅಧಿಕಾರಿಗಳು ಮತದಾರರ ಚೀಟಿ- ಆಧಾರ್ ಕಾರ್ಡ್ನ್ನು ಪಡೆದು ದಾಖಲಿಸಿಕೊಳ್ಳುತ್ತಾರೆ. ಒಂದು ಸಲ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಸಂಖ್ಯೆ ದಾಖಲಿಸಿದರೆ ಸಾಕು, ನಕಲಿ ಮತದಾನ ತಡೆಯಲು ಅತ್ಯಂತ ಪರಿಣಾಮಕಾರಿಯಾಗಲಿದೆ ಎಂದು ಸಚಿವಾಲಯ ತಿಳಿಸಿದೆ.
ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ವಿಧಾನ:
ಸರ್ಕಾರದ ಅಧಿಕೃತ ಪೋರ್ಟಲ್ ಆಗಿರುವ http://voterportal.eci.gov.in ಗೆ ಭೇಟಿ ನೀಡಬೇಕು. ನಿಮ್ಮ ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮತ್ತು ಮತದಾರರ ಗುರುತಿನ ವೋಟರ್ ಚೀಟಿಯ ಸಂಖ್ಯೆಯನ್ನು ಬಳಸಿಕೊಂಡು ಪೋರ್ಟಲ್‌ಗೆ ಲಾಗ್ ಇನ್ ಮಾಡಬೇಕು. ನಂತರ ನಿಮ್ಮ ರಾಜ್ಯ, ಜಿಲ್ಲೆ ಮತ್ತು ಹೆಸರು, ಹುಟ್ಟಿದ ದಿನಾಂಕ ಹಾಗೂ ತಂದೆ ಹೆಸರು ಸೇರಿದಂತೆ ನಿಮ್ಮ ವೈಯಕ್ತಿಕ ಮಾಹಿತಿ ನಮೂದಿಸಬೇಕಾಗುತ್ತದೆ. ಬಳಿಕ ಸರ್ಚ್ ಕ್ಲಿಕ್ ಮಾಡಿದ ನಂತರ, ಸ್ಕ್ರೀನ್ ಮೇಲೆ ಕಾಣಿಸುತ್ತೆ. ಇದಾದ ಬಳಿಕ ಫೀಡ್ ಆಧಾರ್ ನಂಬರ್ ಆಫಷನ್ ಮೇಲೆ ಕ್ಲಿಕ್ ಮಾಡಬೇಕು. ಆಧಾರ್ ಸಂಖ್ಯೆಯೊಂದಿಗೆ ವೋಟರ್ ಐಡಿ ಸಂಖ್ಯೆ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ಮತ್ತು ನೋಂದಾಯಿತ ಇಮೇಲ್ ಅನ್ನು ವೆಬ್‌ಪುಟದಲ್ಲಿನ ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ ಸಬ್‌ಮಿಟ್ ಕ್ಲಿಕ್ ಮಾಡಬೇಕು. ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ನ್ನು ಲಿಂಕ್ ಮಾಡುವ ಪ್ರಕ್ರಿಯೆ ಆರಂಭವಾಗುತ್ತದೆ.