ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಗೆ ದಿನಗಣನೆ ಆರಂಭ: ರಾಜ್ಯ ಚುನಾವಣಾ ಆಯೋಗದಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ: ಏಪ್ರಿಲ್ – ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ


ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರದ ಮೂಲಕ ಸೂಚನೆ ನೀಡಿದೆ.

ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ‘ಕರ್ನಾಟಕ ರಾಜ್ಯ ವಿಧಾನಸಭೆಗೆ ಏಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆ ಕೇಂದ್ರ ಚುನಾವಣಾ ಆಯೋಗದಿಂದ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಕೆಲವು ಮಾಡಲೇಬೇಕಾದ ಚುನಾವಣಾ ಪೂರ್ವ ಸಿದ್ಧತೆಯನ್ನು ಕಡ್ಡಾಯವಾಗಿ ಚುನಾವಣೆ ಘೋಷಣೆಗೆ ಮುನ್ನವೇ ಮಾಡಿ ಮುಗಿಸಬೇಕು’ ಎಂದು ಸೂಚಿಸಿದೆ.

ರಾಜ್ಯ ಚುನಾವಣಾ ಆಯೋಗ ಈಗಾಗಲೇ ಚುನಾವಣೆಗೆ ತಯಾರಿ ನಡೆಸುತ್ತಿದು ಕೇಂದ್ರ ಚುನಾವಣಾ ಆಯೋಗದ ತಂಡ ಸಹ ರಾಜ್ಯಕ್ಕೆ ಆಗಮಿಸಿ ಸಿದ್ಧತೆಗಳ ಪರಿಶೀಲನೆ ನಡೆಸಿದೆ.

error: Content is protected !!