ಬೆಳ್ತಂಗಡಿ ಅಕ್ರಮ ಮರಳುಗಾರಿಕೆ, ಕಳಪೆ ಕಾಮಗಾರಿಗಳ ನ್ಯಾಯಾಂಗ ತನಿಖೆ: ಮಾ27 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ಭರವಸೆ ಸಿಗುವವರೆಗೆ ಪ್ರತಿಭಟನೆ ಶೇಖರ್ ಲಾಯಿಲ:

 

 

ಬೆಳ್ತಂಗಡಿ :ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ , ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರುಗಳಿಂದ ತನಿಖೆಗೆ ಆಗ್ರಹಿಸಿ ಮಾ 20 ರಂದು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಸಿಪಿಐಎಂ ಮುಖಂಡ ಶೇಖರ್ ಲಾಯಿಲ ಏಕಾಂಗಿ ಉಪವಾಸ ಸತ್ಯಾಗ್ರಹವನ್ನು ಮಾಡುತಿದ್ದು ಕಳೆದ 5 ದಿನಗಳಿಂದ ಯಾವುದೇ ಅಧಿಕಾರಿಗಳು ಬಂದು ಮಾತನಾಡುವ ಸೌಜನ್ಯತೆ ಕೂಡ ತೋರದೇ ಇರುವುದರಿಂದ ಮಾ 27 ಸೋಮವಾರದಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಅಕ್ರಮಗಳ ಬಗ್ಗೆ ಸಮಗ್ರ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರಿಂದ  ನಡೆಸಬೇಕು ಈ ಬಗ್ಗೆ ಸ್ಪಷ್ಟ ಭರವಸೆ ಸಿಗುವವರೆಗೆ ಈ ಸತ್ಯಾಗ್ರಹ ಮುಂದುವರಿಯಲಿದೆ ಎಂಬ ಮಾಹಿತಿಯನ್ನು ಮಾಧ್ಯಮದವರೊಂದಿಗೆ ಹಂಚಿಕೊಂಡಿದ್ದಾರೆ.

error: Content is protected !!