ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಇಂದು ಪ್ರಕಟ: ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ: ಚುನಾವಣಾ ದಿನಾಂಕ ಘೋಷಣೆಯಾದ ತಕ್ಷಣ ನೀತಿ ಸಂಹಿತೆ ಜಾರಿ..

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಗೆ ಕ್ಷಣಗಣನೆ ಆರಂಭಗೊಂಡಿದ್ದು ಕೇಂದ್ರ ಚುನಾವಣಾ ಆಯೋಗ ಇಂದು ಬೆಳಗ್ಗೆ 11.30ಕ್ಕೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಮೇ 5 ರೊಳಗೆ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ತಿಳಿದಿತ್ತಾದರೂ, ಆಯೋಗ ಇಂದೇ ಭಿತ್ತರಿಸಲು ಮುಂದಾಗಿದೆ. ಇಂದು ದಿನಾಂಕ ಘೋಷಣೆಯಾದ ಬಳಿಕ ಸಂಜೆಯಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ರವಾನಿಸಲಾಗಿತ್ತು. ಇಂದು ದೆಹಲಿಯ ವಿಜ್ಞಾನ ಭವನದ ಕಚೇರಿಯಲ್ಲಿ ನಡೆಯುವ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ ಪ್ರಕಟವಾಗಲಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ 24 ರಂದು ಕೊನೆಗೊಳ್ಳಲಿದ್ದು, ಮೇ ತಿಂಗಳಲ್ಲಿಯೇ ವಿಧಾನ ಸಭಾ ಚುನಾವಣೆ ನಡೆಯುವ ಸಾಧ್ಯತೆಯೂ ಇದೆ. ಈ ನಡುವೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳು ಭರ್ಜರಿ ಸಿದ್ದತೆ ಮಾಡಿಕೊಂಡಿದೆ. 2018ರ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆದಿತ್ತು. ಹೀಗಾಗಿ ಈ ಬಾರಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

error: Content is protected !!