ಸವಣಾಲು: ಬೈಕ್ – ಬೈಕ್‌ಗಳ ಮಧ್ಯೆ ಅಪಘಾತ: ಓರ್ವ ಸಾವು: ಇನ್ನೋರ್ವ ಗಂಭೀರ..!

ಬೆಳ್ತಂಗಡಿ : ಬೈಕ್- ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ.

ಸವಣಾಲು ಮಸೀದಿ ಬಳಿ ಎರಡು ಬೈಕ್‌ಗಳು ಮುಖಾ ಮುಖಿ ಡಿಕ್ಕಿಯಾಗಿದ್ದು ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ(62) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೋರ್ವ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!