ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಮಾರ್ಚ್ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50 ರೂ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 50 ರೂ. ಏರಿಕೆ ಮಾಡಿದ್ದವು. ಆದರೆ ಏ.1ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ಪ್ರತಿ 19 ಕೆಜಿ ಸಿಲಿಂಡರ್ ಮೇಲೆ 91.50 ರೂ.ನಷ್ಟು ಕಡಿತ ಮಾಡಿದೆ. ಈ ಮೂಲಕ ಗ್ರಾಹಕರ ಹೊರೆಯನ್ನು ಸ್ವಲ್ಪಮಟ್ಟಿಗೆ ತಗ್ಗಿಸಿದೆ.ಆದರೆ ಸಾರ್ವಜನಿಕ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಕಳೆದ 5 ತಿಂಗಳಿನಲ್ಲಿ ಇದೇ ಮೊದಲಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿರುವುದು. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಈಗ 2,028 ರೂಪಾಯಿಗಳಾಗಿದೆ.