ಉಜಿರೆ: ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಏ.09 ರಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯಷ್ಟು ಕೆಳಗಿನ ಕಂದಕಕ್ಕೆ ಉರುಳಿ ಬಿದ್ದಿದೆ.
ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಪುಷ್ಪಾವತಿ ಆರ್.ಶೆಟ್ಟಿ ಸಹಿತ ಪುತ್ರಿ ಪೂರ್ಣಿಮಾ ಶೆಟ್ಟಿ ಮೊಮ್ಮಗ ಸಮೃದ್ಧ್ ಹಾಗೂ ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿಯವರು ಗಾಯಗೊಂಡಿದ್ದಾರೆ.
ಅದರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.