ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಾರು ಕಂದಕಕ್ಕೆ ಉರುಳಿ ಬಿದ್ದು ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕಾರ್ಯಕ್ರಮಬವೊಂದಕ್ಕೆ ಹೋಗಿ ಮರಳುತ್ತಿದ್ದ ವೇಳೆ ಆದಿತ್ಯವಾರ ರಾತ್ರಿ ಈ ಘಟನೆ ನಡೆದಿತ್ತು.
ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಕ್ಕಳಾದ ಸಮೃದ್ಧ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು.
ಸರೋಜಿನಿ ಶೆಟ್ಟಿ
ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆ ಹಾಗೂ ಉಜಿರೆ ಆಸ್ಪತ್ರೆಗೆ ದಾಖಲಿಸಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ
ಸರೋಜಿನಿ ಶೆಟ್ಟಿ ಅವರು ಮಂಗಳೂರಿನಲ್ಲಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.