ಗುರುವಾಯನಕೆರೆ ಲಾರಿಗೆ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು ಮತ್ತೋರ್ವ  ಗಂಭೀರ:

 

 

ಬೆಳ್ತಂಗಡಿ : ಗುರುವಾಯನಕರೆ ಸಮೀಪದ ಶಕ್ತಿನಗರ ಎಂಬಲ್ಲಿ ನಿಲ್ಲಿಸಿದ್ದ  ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸಾವನ್ನಪ್ಪಿ ,ಮತ್ತೊರ್ವ ಗಂಭೀರ ಗಾಯಗೊಂಡ ಘಟನೆ ಎ 10 ರಂದು ರಾತ್ರಿ ನಡೆದಿದೆ. ಬೈಕ್ ನಲ್ಲಿದ್ದ ಇಬ್ಬರ ಬಗ್ಗೆ ಯಾವುದೇ ವಿಳಾಸ ಪತ್ತೆಯಾಗಿಲ್ಲ. ವಿಳಾಸಕ್ಕಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಸಾವನ್ನಪ್ಪಿದ ವ್ಯಕ್ತಿಯ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಮತ್ತೋರ್ವನಿಗೂ ಗಾಯಗಳಾಗಿದ್ದು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!