ಬೆಳ್ತಂಗಡಿ: ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ದಾಖಲೆ ಇಲ್ಲದೆ 10 ಲಕ್ಷ ರೂ ಸಾಗಾಟ ಮಾಡುತ್ತಿದ್ದ ಎ.ಟಿ.ಎಂ ವಾಹನವನ್ನು ಜಪ್ತಿ ಮಾಡಿ 10ಲಕ್ಷ ರೂ.ವನ್ನು ವಶಕ್ಕೆ ಪಡೆದುಕೊಂಡಿದೆ.
ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾತ್ರಿ ಸುಮಾರು 10 ಗಂಟೆಗೆ ಹಣ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಹಣ ಹಾಗೂ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ತನಿಖೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹಸ್ತಾಂತರಿಸಿದ್ದಾರೆ