ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪೂರ್ಜೆಬೈಲು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನಿಲ್ ಕುಮಾರ್ .ಡಿಯವರು ಪತ್ತೆ ಮಾಡಿದ್ದಾರೆ.
ಏ.10 ರಂದು ಸುಮಾರು 10 ಗಂಟೆ ವೇಳೆಗೆ ಪೊಲೀಸ್ ಉಪ ನಿರೀಕ್ಷಕರಾದ ಅನಿಲ್.ಕುಮಾರ್.ಡಿರವರು ಗಸ್ತಿನಲ್ಲಿದ್ದಾಗ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಖಾಸಿಂ ಮಗನಾದ ರಂಮ್ಲನ್ ಯಾನೆ ಇರ್ಫಾನ್ (25) ಎಂಬತ ಗಾಂಜಾ ಸೇವೆನೆ ಮಾಡಿರುವುದನ್ನು ಪತ್ತೆಹಚ್ಚಿದ್ದಾರೆ.
ಈ ಬಗ್ಗೆ ಪಂಚರ ಸಮಕ್ಷಮ ಮಹಜರು ಮುಖೇನ ಆರೋಪಿಯನ್ನು ವಶಕ್ಕೆ ಪಡೆದು ಆತನನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ವ್ಯಕ್ತಿಯು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ವೈದ್ಯಾಧಿಕಾರಿಯವರು ದೃಢೀಕರಣಗೊಳಿಸಿದ್ದಾರೆ. ಆರೋಪಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.