ಬೆಳ್ತಂಗಡಿ : ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಇರುವುದರಿಂದ ಎಲ್ಲಾ ವಾಹನಗಳನ್ನು ಅಧಿಕಾರಿಗಳು ತಪಾಸಣೆಗೊಳಪಡಿಸುತಿದ್ದಾರೆ. ನಿನ್ನೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಸಹಿತ ವಾಹನ ಬ್ಯಾಗ್ ತಪಾಸಣೆಗೈದ ಅಧಿಕಾರಿಗಳು ಬಿಜೆಪಿ ರಾಜಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಾರನ್ನೂ ಪರಿಶೀಲನೆ ನಡೆಸಿದ್ದಾರೆ. ಎ 13. ರಂದು ತನ್ನ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಚುನಾವಣಾಧಿಕಾರಿಗಳು ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.
ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಎ.13 ರಂದು ಸಂಜೆ ನಳಿನ್ ಕುಮಾರ್ ಕಟೀಲ್ ಮತ್ತು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಜೊತೆ ಕಾರಿನಲ್ಲಿ ಬರುತ್ತಿದ್ದಾಗ
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ತಡೆದು ನಿಲ್ಲಿಸಿ ಸಂಪೂರ್ಣವಾಗಿ ಕಾರನ್ನು ಪರಿಶೀಲನೆ ನಡೆಸಿ ನಂತರ ಪ್ರಯಾಣ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.