ಸಂಪಾಜೆ ಕಾರಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ 6 ಮಂದಿ ದುರ್ಮರಣ:

 

 

 

ಸಂಪಾಜೆ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ  ಕಾರು ನಡುವೆ ನಡೆದ ಭೀಕರ ರಸ್ತೆ  ಅಪಘಾತದಲ್ಲಿ    ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ  ದುರ್ಘಟನೆ  ಸಂಪಾಜೆಯಲ್ಲಿ ಎ 14 ಶುಕ್ರವಾರ   ನಡೆದಿದೆ.

ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಮಡಿಕೇರಿಯತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು ಎಂದು ತಿಳಿದುಬಂದಿದೆ. ಮಳವಳ್ಳಿ ತಾಲೂಕಿನವರಾದ ಕುಮಾರ (35), ಶೀಲಾ (29), ಪ್ರಿಯಾಂಕ (42), ಮಕ್ಕಳಾದ ಮನಸ್ವಿ (8), ಯಶಸ್ ಗೌಡ (12), ಮಿಷಿಕಾ (ಒಂದೂವರೆ ವರ್ಷ) ಮೃತಪಟ್ಟವರು. ಗಂಭೀರ ಗಾಯಗೊಂಡ ಮಂಜುನಾಥ ಎಂಬುವರು ಮಂಗಳೂರು ಆಸ್ಪತ್ರೆ ಹಾಗೂ ಬಿಯಾನ್ ಗೌಡ ಎಂಬುವರನ್ನು ಚಿಕಿತ್ಸೆಗೆ ಕೆವಿಜಿ ಮೆಡಿಕಲ್ ಕಾಲೇಜಿಗೆ ಸೇರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಮೃತದೇಹಗಳನ್ನು ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರು ಪುರುಷ ಹಾಗೂ ಒಂದು ಮಗುವಿನ ಮೃತದೇಹ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಡಗು ಎಸ್‌ಪಿ ರಾಮರಾಜನ್, ಹೆಚ್ಚುವರಿ ಎಸ್‌ಪಿ ಸುಂದರರಾಜನ್ ಅವರು ಘಟನಾ ಸ್ಥಳ ಮತ್ತು ಸುಳ್ಯ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಈ ಬಗ್ಗೆ ಮಡಿಕೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!