ಜಗದೀಶ್ ಶೆಟ್ಟರ್ ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ: ಧರ್ಮಸ್ಥಳದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ .ಡಿ ಕುಮಾರಸ್ವಾಮಿ:

 

 

 

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎ.15 ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಜೆ ಆಗಮಿಸಿದರು. ನಂತರ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಧರ್ಮಸ್ಥಳದಲ್ಲಿ ರಾತ್ರಿ ವಾಸ್ತವ್ಯ ಹೂಡಿ
ಆದಿತ್ಯವಾರ ಮುಂಜಾನೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು.
ದೇವರ ದರ್ಶನ ಪಡೆದು ಹೊರಬರುವ ವೇಳೆ ನೆರೆದ ಭಕ್ತರು ಅವರ ಬೆಂಬಲಿಗರು ಜೈಕಾರ ಹಾಕಿ ಹಸ್ತಲಾಘವ ಮಾಡಿದರು.ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮುಂದಿನ ದಿನಗಳಲ್ಲಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ನಾಳ ದುರ್ಗಾಪರಮೇಶ್ವರೀ ತಾಯಿಯ ಆಶೀರ್ವಾದದಿಂದ ‌ರಾಜ್ಯದಲ್ಲಿ ಸುಸ್ಥಿರ ಆಡಳಿತ ಬರುವಂತೆ ಹಾಗೂ ದೇವರ ಅನುಗ್ರಹದಿಂದ‌ ನಾಡಿನ‌ ಜನತೆಗೆ ಒಳಿತಾಗಲಿ ಎಂದು ವಿಶೇಷ ಹೋಮ ಹವನ, ಪೂಜೆ ಮಾಡಿದ್ದೇನೆ. ಪಕ್ಷದ ಮತ್ತು ಎಲ್ಲ ವಿಚಾರಗಳ ಬಗ್ಗೆಯೂ ಸಂಕಲ್ಪ ಮಾಡಿದ್ದೇನೆ ಎಂದರು.

ಜಗದೀಶ್ ಶೆಟ್ಟರ್ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು
ಜಗದೀಶ್ ಶೆಟ್ಟರ್ ಅವರ ರಾಜೀನಾಮೆ ಅದು ಅವರ ಪಕ್ಷದ ಆಂತರಿಕ ಬೆಳವಣಿಗೆಗಳು ಅವರೊಬ್ಬ ಅನುಭವಸ್ಥ ರಾಜಕಾರಣಿ ಜನಸಂಘದಿಂದಲೂ ಕೆಲಸ ಮಾಡಿರುವಂತವರು.ಅವರಂತವರೇ ಇಂತಹ ತೀರ್ಮಾನ ಮಾಡಿದ್ದಾರೆ ಅಂದ್ರೆ ಬಿಜೆಪಿಯ ಡಿಎನ್ಎ ಬಗ್ಗೆ ಈ ಮೊದಲೇ ನಾನು ಹೇಳಿದ್ದೆ ಬಹುಶಃ ಅದು ಈಗಿನ ಬಿಜೆಪಿಯೊಳಗಿನ ಬೆಳವಣಿಗೆಗೆ ಈ ಸಮಯದಲ್ಲಿ ಪೂರಕವಾಗಿದೆ ಎಂದ ಅವರು ಜಗದೀಶ್ ಶೆಟ್ಟರಂತಹ ದೊಡ್ಡ ನಾಯಕರ ಅವಶ್ಯಕತೆ ಜೆ ಡಿ ಎಸ್   ಪಕ್ಷಕ್ಕಿಲ್ಲ ಸಣ್ಣ ನಾಯಕರೇನಾದರೂ ಬಂದರೆ ಸ್ವಾಗತಿಸುತ್ತೇವೆ ಎಂದರು.

error: Content is protected !!