ಬಿಜೆಪಿಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್: ಕಾಂಗ್ರೆಸ್ ಪಕ್ಷ ಸೇರಲು ವೇದಿಕೆ ಸಜ್ಜು..!

 

 

 

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಈ ಬಾರಿ
ಬಿಜೆಪಿ ಟಿಕೆಟ್ ನೀಡದಿರುವುದರಿಂದ ಬೆಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಅದಲ್ಲದೇ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಶಿರಸಿಯಲ್ಲಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿ‌ ಹುಬ್ಬಳ್ಳಿಗೆ ವಾಪಸ್ಸಾಗುತ್ತಿರುವ ಶೆಟ್ಟರ್ ಅವರನ್ನು, ಇಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ‌ ಕರೆದೊಯ್ಯಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.ಕೋಲಾರದಲ್ಲಿ ಪಕ್ಷ ಸೇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

error: Content is protected !!