ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ:ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಗಂಗಾಧರ ಗೌಡ ಅಸಾಮಾಧಾನ..?; ಬಿಜೆಪಿಯತ್ತ ಕಾಂಗ್ರೆಸಿಗರ ಒಲವು:ಹಲವು ಕಾಂಗ್ರೆಸ್ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆ..?

 

 

ಬೆಳ್ತಂಗಡಿ:ಮೇ 10 ರಂದು ಕರ್ನಾಟಕ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಬೆಳ್ತಂಗಡಿ ತಾಲೂಕಿನಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಇವತ್ತು ನಾಮ ಪತ್ರ ಸಲ್ಲಿಕೆ  ಮಾಡಲಿದ್ದಾರೆ.‌ಕಳೆದ 5 ವರ್ಷಗಳಿಂದ ಅಭಿವೃದ್ಧಿ ಮೂಲಕ ಮನೆ ಮಾತಾಗಿರುವ ಶಾಸಕ ಹರೀಶ್ ಪೂಂಜ ಬಿಜೆಪಿ ಅಭ್ಯರ್ಥಿಯಾಗಿ ಹಾಗೂ   ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ  ಸಲ್ಲಿಕೆ ಮಾಡಲಿದ್ದಾರೆ. ವಿವಿಧ ಅಭಿವೃದ್ಧಿ ಚಿಂತನೆಗಳ ಮೂಲಕ ಮನೆ ಮಾತಾಗಿರುವ ಶಾಸಕ ಹರೀಶ್ ಪೂಂಜ ಅವರು ಈಗಾಗಲೇ ಜನಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.ಶಾಸಕರ ಕಾರ್ಯ ವೈಖರಿಯನ್ನು ಮೆಚ್ಚಿ ಹಲವಾರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅದಲ್ಲದೇ ಕಾಂಗ್ರೆಸ್ಸಿನಲ್ಲಿ ಅಸಾಮಾಧಾನ ಹೊಗೆಯಾಡುತಿದ್ದು ಮಾಜಿ ಸಚಿವ ಗಂಗಾಧರ ಗೌಡ ಅವರು ಇವತ್ತು ನಡೆಯಲಿರುವ   ನಾಮ ಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲೂ ಭಾಗವಹಿಸುವುದು ಅನುಮಾನ ಎಂಬುವುದು ಕಾಂಗ್ರೆಸ್  ಆಪ್ತರ ಅಭಿಪ್ರಾಯವಾಗಿದೆ.  ಗಂಗಾಧರ ಗೌಡ ಅವರು ಟಿಕೇಟ್ ಆಕಾಂಕ್ಷಿಯಾಗಿದ್ದು ರಕ್ಷಿತ್ ಶಿವರಾಂ ಅವರು ಅಭ್ಯರ್ಥಿ ಎಂದು  ಘೋಷಣೆಯಾದ ಬಳಿಕ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ  ಎಂಬ ಬಗ್ಗೆ ಪತ್ರಿಕಾಗೋಷ್ಠಿಯೊಂದರಲ್ಲಿ ಮಾಧ್ಯಮದವರ ಪ್ರಶ್ನೆಗೆ ಮಾಜಿ ಶಾಸಕ ವಸಂತ ಬಂಗೇರ  ಕೂಡ ಗಂಗಾಧರ ಗೌಡರಿಗೆ ಬೇಸರ ಇರುವ ಬಗ್ಗೆ ತಿಳಿಸಿದ್ದರು.    ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ‌ ಬೆಳಿಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸಾವಿರಾರೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ 12 ಗಂಟೆಗೆ ಬೆಳ್ತಂಗಡಿ ತಾಲೂಕು ಆಡಳಿತ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಗುರುವಾಯನಕರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ 12 ಗಂಟೆಗೆ  ಕಾರ್ಯಕರ್ತರ ಸಮಾವೇಶ  ಮುಗಿಸಿ ಅಲ್ಲಿಂದ ಮುಖಂಡರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತಾಲೂಕು ಆಡಳಿತ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಜನ ಸಂದಣಿ ಹೆಚ್ಚಾಗುವ ಸಂಭವ ಇರುವುದರಿಂದ ವಾಹನ ಸಂಚಾರದ ಮಾರ್ಗ ಬದಲಾವಣೆಯನ್ನೂ ಮಾಡಲಾಗಿದೆ.

error: Content is protected !!