ಬೆಳ್ತಂಗಡಿ: 2022-23ರ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆಯ ಅಂತರಾಷ್ಟ್ರೀಯ ಅಭಿವೃದ್ಧಿ ಕಾರ್ಯಕ್ರಮದಡಿ ನಡೆದಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆ ಇಲ್ಲಿಯ ಅಂತಿಮ ಸೆಮಿಸ್ಟರ್‌ನ ತೋಟಗಾರಿಕಾ ವಿಭಾಗದ ವಿದ್ಯಾರ್ಥಿನಿ ಅಂಚಿತಾ ಡಿ ಜೈನ್ ಇವರು ಅತ್ಯುನ್ನತ ಅಂಕಗಳೊಂದಿಗೆ ಆಯ್ಕೆಯಾಗಿ ಸಂಸ್ಥೆ, ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಇವರು ರಾಷ್ಟ್ರೀಯ ಸೇವಾ ಯೋಜನೆ ಘಟಕ ಮೂಡಿಗೆರೆಯ ಪ್ರತಿನಿಧಿಯಾಗಿ ಕಾಲೇಜು ಹಂತದಲ್ಲಿ ಆಯ್ಕೆಗೊಂಡ ಬಳಿಕ ಶಿವಮೊಗ್ಗ ಕೃಷಿ & ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ನಡೆದ ಆಯ್ಕೆ ಸುತ್ತಿನಲ್ಲಿ ಮುಂದಿನ ಹಂತಕ್ಕೆ ತೇರ್ಗಡೆಗೊಂಡು, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಶಿಬಿರದಲ್ಲಿ ಭಾಗವಹಿಸಿ 32 ವಿದ್ಯಾರ್ಥಿಗಳಲ್ಲಿ ಓರ್ವಳಾಗಿ ಆಯ್ಕೆಗೊಂಡು, ಮುಂದಕ್ಕೆ ತಮಿಳುನಾಡಿನ ತಿರುಚಿರಾಪಳ್ಳಿಯ ನ್ಯಾಷನಲ್ ಕಾಲೇಜಿನಲ್ಲಿ ನಡೆದ 10 ದಿನಗಳ ದಕ್ಷಿಣ ವಲಯ ಪೂರ್ವ ಗಣರಾಜ್ಯೋತ್ಸವದ ಶಿಬಿರದಲ್ಲಿ ಭಾಗವಹಿಸಿದ್ದರು. ಮೂರು ತಿಂಗಳು ಕಾಲ ಜರ್ಮನಿಯ ಟ್ಯೂಬಿಂಗನ್ನಲ್ಲಿರುವ ಎಬರ್ಹಾರ್ಡ ಕಾಲ್ರ್ಸ್ ಮಹಾವಿಶ್ವವಿದ್ಯಾಲಯದಲ್ಲಿ ಉಚಿತ ತರಬೇತಿ ಹಾಗೂ ಇಂಟರ್ನ್ಶಿಪ್ ಮಾಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಇವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.