ಬೆಳಾಲ್: ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ: ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಹರೀಶ ಪೂಂಜ:

 

 

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆಯ ಕಾವು ದಿನದಿಂದ ದಿನ ಹೆಚ್ಚಾಗುತ್ತಿರುವ ಬೆನ್ನಲ್ಲೆ   ಇತರ ಪಕ್ಷಗಳ ಕಾರ್ಯಕರ್ತರು   ಬಿಜೆಪಿ ಸೇರ್ಪಡೆಗೊಳ್ಳುತಿದ್ದಾರೆ.  ಶಾಸಕ ಹರೀಶ್ ಪೂಂಜ ಅವರು   ಕಳೆದ 5 ವರ್ಷಗಳ ಅವಧಿಯಲ್ಲಿ ತಾಲೂಕಿನಾದ್ಯಂತ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಲವಾರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳಾಲು ಬೂತ್ ಸಮಿತಿ ಅಧ್ಯಕ್ಷ ಕೇಶವ ಗೌಡ, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಾದ ಸಂತೋಷ್ ಮಡಿವಾಳ, ಪ್ರಭಾಕರ ಗೌಡ, ದಿನೇಶ್, ಪ್ರವೀಣ್, ಉಪೇಂದ್ರ ಹಾಗೂ ಬೈಪಾಡಿಯ ಕಾಂಗ್ರೆಸ್ ಕಾರ್ಯಕರ್ತರಾದ ದಿವಾಕರ ಗೌಡ, ಚೆನ್ನಕೇಶವ, ನೇಮಣ್ಣ ಗೌಡ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

ಶಾಸಕ ಹರೀಶ್‌ ಪೂಂಜ ಅವರು ಕಾಂಗ್ರೆಸ್‌ ಕಾರ್ಯಕರ್ತರನ್ನು ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡು, ಬೆಳಾಲು ವ್ಯಾಪ್ತಿಯಲ್ಲಿ ಬಿಜೆಪಿ ಬಲಿಷ್ಠವಾಗುತ್ತಿದ್ದು, ನಮ್ಮೊಂದಿಗೆ ಸೇರಿಕೊಂಡಿರುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿದ್ದಾರೆ ಎಂದರು.

error: Content is protected !!