ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನ ಬಾಕಿ ಇರುವ ಸಂದರ್ಭದಲ್ಲಿ ಬಿಜೆಪಿ ಮತದಾರರನ್ನು ಸೆಳೆಯಲು ಇಂದು ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ, ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆಯನ್ನು ಪರಿಶೀಲನೆ ನಡೆಸಿ, ಪ್ರಣಾಳಿಕೆ ಬಿಡುಗಡೆ ಮಾಡಿಲಾಗಿದೆ.
ಪ್ರಣಾಳಿಕೆಯಲ್ಲಿ ಏಕರೂಪದ ನಾಗರೀಕ ಸಂಹಿತೆ ಜಾರಿ, ನಗರ ಪ್ರದೇಶದಲ್ಲಿ 5 ಲಕ್ಷ, ಗ್ರಾಮೀಣ ಪ್ರದೇಶದಲ್ಲಿ 10 ಲಕ್ಷ ಮನೆ ನಿರ್ಮಾಣ, ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು, ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, 5ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ, ಯುಗಾದಿ, ಗಣೇಶ, ದೀಪಾವಳಿ ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ, ಎನ್ ಇ ಪಿ ಅಡಿ ಶಿಕ್ಷಣಕ್ಕೆ ಜೆಎಸ್ಡಿಪಿ ಶೇ.6ರಷ್ಟು ಅನುದಾನದ ಭರವಸೆಯನ್ನು ನೀಡಲಾಗಿದೆ.