ಭರ್ಜರಿ ಮತಬೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ: ದೇಶಕ್ಕೆ ಮಾದರಿಯಾಗುವಂತೆ ತಾಲೂಕು ಅಭಿವೃದ್ಧಿಯ ಭರವಸೆ

ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರ್ಜರಿ ಮತಬೇಟೆಯಲ್ಲಿದ್ದಾರೆ.

ಮೇ.05ರಂದು ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜ ಬಹಿರಂಗ ಪ್ರಚಾರ ಸಭೆ ನಡೆಸಿ ‘ಬೆಳ್ತಂಗಡಿ ಕ್ಷೇತ್ರದ ಬಂಧುಗಳು ಮೊದಲ ಬಾರಿಗೆ ಗೆಲ್ಲಿಸಿದಾಗ ರಸ್ತೆ, ಕಿಂಡಿ ಅಣೆಕಟ್ಟು, ಶಾಲಾ-ಕಾಲೇಜು ಅಭಿವೃದ್ಧಿ, ಗ್ರಂಥಾಲಯ ನಿರ್ಮಾಣ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಯೂ ಗೆಲ್ಲಿಸಿದರೆ ತಾಲೂಕನ್ನು ದೇಶಕ್ಕೆ ಮಾದರಿಯಾಗಿ ಅಭಿವೃದ್ಧಿಪಡಿಸುತ್ತೇನೆ’ ಎಂದು ಮತದಾರರಿಗೆ ಭರವಸೆ ನೀಡಿದ್ದಾರೆ.

ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಹಿರಿಯರಾದ ಸುಬ್ರಮಣ್ಯ ಅಗರ್ತ, ಚಲನಚಿತ್ರ ನಟರಾದ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!