ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ: ನಾಲ್ವರಿಗೆ 625ಕ್ಕೆ 625 ಅಂಕ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ಅತೀ ಹೆಚ್ಚು ಅಂಕಗಳ ಮೂಲಕ ರಾಜ್ಯದಲ್ಲಿ ಚಿತ್ರದುರ್ಗ ಪ್ರಥಮ ಸ್ಥಾನ ಪಡೆದಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಮೂಲಕ ಅಧಿಕಾರಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಶೇ.96.80 ಫಲಿತಾಂಶದ ಮೂಲಕ ಚಿತ್ರದುರ್ಗ ಪ್ರಥಮ ಸ್ಥಾನ, ಶೇ.96.74 ಮೂಲಕ ಮಂಡ್ಯ ಜಿಲ್ಲೆ ದ್ವಿತೀಯ ಸ್ಥಾನ, ಶೇ. 96.68 ಫಲಿತಾಂಶದ ಮೂಲಕ ಹಾಸನ ಜಿಲ್ಲೆ ಮೂರನೆ ಸ್ಥಾನ ಪಡೆದಿದೆ. ಶೇ 89.47 ಅಂಕಗಳನ್ನು ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ 19ನೇ ಸ್ಥಾನದಲ್ಲಿದೆ.

ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ. ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇಕಡಾ 80.08 ಬಾಲಕರು ತೇರ್ಗಡೆ ಹೊಂದಿದ್ದಾರೆ.

error: Content is protected !!