ಪುತ್ತೂರು: ಬ್ಯಾನರ್ ಅಳವಡಿಕೆ ಆರೋಪದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ದೌರ್ಜನ್ಯದ ವಿರುದ್ಧ ಈಗಾಗಲೇ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಳೆದ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಯುವಕರ ಆರೋಗ್ಯ ವಿಚಾರಿಸಿ ಅವರಿಗೆ ಧೈರ್ಯ ತುಂಬಿದರು.ನಂತರ ಮಾತನಾಡಿದ ಅವರು ಕಾಂಗ್ರೆಸ್ ಅಡಳಿತ ಬರುವ ನಾಲ್ಕು ದಿನಗಳಲ್ಲೇ ಪೊಲೀಸರಿಂದ ಹಿಂದೂ ಯುವಕರ ಮೇಲೆ ದೌರ್ಜನ್ಯಗಳು ನಡೆಯಲು ಪ್ರಾರಂಭವಾಗಿದೆ. ಇದು ಖಂಡನೀಯ ತಪ್ಪೆಸಗಿದ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಬೇಕು. ಒಂದು ವೇಳೆ ಸರಿಯಾದ ಕ್ರಮ ಕೈಗೊಳ್ಳದೇ ಇದ್ದಲ್ಲಿ ಹಿಂದೂ ಸಮಾಜ ಒಟ್ಟಾಗಿ ಈ ಬಗ್ಗೆ ಹೋರಾಟ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಹಿಂದೂ ನಾಯಕ ಅರುಣ್ ಪುತ್ತಿಲ, ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ,