ಪ್ರಚೋದನಾತ್ಮಕ ಪೋಸ್ಟ್ ಗಳ ಮೇಲೆ ಖಾಕಿ ಕಣ್ಣು: ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ರಚನೆ: ಪೋಸ್ಟ್ ಹಾಕುವವರ ವಿರುದ್ಧ ಕ್ರಮ..!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳು ಹರಿದಾಡುತ್ತಿದ್ದು, ಇಂತಹ ಪೋಸ್ಟ್ ಗಳನ್ನು ಹಾಕುವ ಅಥವಾ ಫಾರ್ವರ್ಡ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ಪೋಸ್ಟ್ ಗಳ ಮೇಲೆ ನಿಗಾ ಇಡಲು ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ರಚಿಸಲಾಗಿದೆ. ಈ ರೀತಿಯ ಸಂದೇಶ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಲೈಕ್, ಕಮೆಂಟ್ ಮಾಡುವುದು ಅಪರಾಧವಾಗಿದೆ ಎಂದಿದ್ದಾರೆ.

error: Content is protected !!