ದ.ಕ ಜಿಲ್ಲೆಯಲ್ಲಿ ಕುಡಿಯುವ ನೀರಿನ ಆಹಾಕಾರ..!: ‘ಜಿಲ್ಲಾಡಳಿತ ಮತ್ತು ಸರ್ಕಾರ ತಕ್ಷಣ ಪರಿಸ್ಥಿತಿಯ ಅವಲೋಕನ ಮಾಡಲಿ: ಶಾಲಾ- ಕಾಲೇಜ್ ಪುನರಾರಂಭವನ್ನು ಮುಂದೂಡಲಿ..!: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಕುಡಿಯುವ ನೀರಿನ ಮತ್ತು ನೀರು ಸರಬರಾಜು ಆಹಾಕಾರ ಉಂಟಾಗಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಸರ್ಕಾರ ತಕ್ಷಣ ಜನಪ್ರತಿನಿಧಿಗಳ ಸಭೆ ಕರೆದು ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಮೇ.20 ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮೆ.29ರಂದು ಶಾಲಾ ಕಾಲೇಜು ಆರಂಭದ ಸುತ್ತೋಲೆ ಬಂದಿದೆ. ಆದರೆ ಹವಾಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರದ ನಂತರ ಮುಂಗಾರು ಮಳೆ ಸೂಚನೆ ಇದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಸರ್ಕಾರ ಶಾಲಾ ಕಾಲೇಜ್ ಆರಂಭದ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು. ಶಾಲೆಯಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜ್ ಪುನರಾರಂಭವನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.

ನೂತನ ಕಾಂಗ್ರೆಸ್ ಸರ್ಕಾರದ ಕುರಿತು ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರ ನಿರ್ಧಾರವೇ ಅಂತಿಮ. ಕಾಂಗ್ರೆಸ್‌ಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವದ ಮತ್ತೊಂದು ಭಾಗವಾದ ಪ್ರತಿಪಕ್ಷ ಭಾರತೀಯ ಜನತಾ ಪಾರ್ಟಿ ಅತ್ಯಂತ ಪರಿಣಾಮಕಾರಿಯಾಗಿ, ಜವಬ್ಧಾರಿಯುತವಾಗಿ ಜನರ ಆಶೋತ್ತರಗಳನ್ನು ಈಡೇರಿಸುವ ದಿಕ್ಕಿನಲ್ಲಿ ಸರಕಾರದ ಕಾರ್ಯನಿರ್ವಣೆಯ ಬಗ್ಗೆ ಸದಾ ಎಚ್ಚರಿಕೆಯಿಂದ ಕೆಲಸ ಮಾಡುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.

error: Content is protected !!