ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು..! : ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಹಲವೆಡೆ ಎನ್‌ಐಎ ದಾಳಿ..!

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇಲೆ ಬಿಹಾರದಲ್ಲಿ ದಾಳಿಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!