ಬೆಳ್ತಂಗಡಿ: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ಪ್ರಕಟವಾಗಿದೆ.
ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಪ್ರಕರಣದ ದೋಷಮುಕ್ತ ಎಂದು ಸಿಬಿಐ ನ್ಯಾಯಧೀಶ ಸಂತೋಷ್ ಸಿ.ಬಿ ಆದೇಶ ಮಾಡಿದ್ದಾರೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ನಡೆದ ಮಾರನೇ ದಿನ ಬಾಹುಬಲಿ ಬೆಟ್ಟದ ಗುಡ್ಡದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ (38) ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಬಳಿಕ ಪೊಲೀಸರು ಬಂಧಿಸಿದ್ದರು.
ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿ ತನಿಖೆಗೆ ನೀಡಿತ್ತು. ಆದರೆ ತಾಲೂಕಿನಲ್ಲಿ ಪ್ರತಿಭಟನೆ ಹೆಚ್ಚಾದಂತೆ ರಾಜ್ಯ ಸರಕಾರ ಮತ್ತೆ ಕೇಂದ್ರ ಸಿಬಿಐ ತನಿಖೆ ನಡೆಸಲು ಆದೇಶ ಮಾಡಿತ್ತು. ಆರೋಪಿ ಸಂತೋಷ್ ರಾವ್ (38) ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ. ಆದರೆ ಈತ ಬೆಂಗಳೂರು ಸಿಬಿಐ ಕೋರ್ಟ್ಗೆ 6 ಬಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಜೂನ್.16 ರಂದು ಖದ್ದು ಹಾಜರಾಗಲು ಸಮಸ್ಸ್ ನೀಡಿತ್ತು. ಅದರಂತೆ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು ಇದೀಗ ಸಾಕ್ಷ್ಯಾಧಾರದ ಕೊರತೆಯಿಂದ ಆರೋಪಿ ಸಂತೋಷ್ ರಾವ್ ದೋಷಮುಕ್ತನಾಗಿದ್ದಾನೆ.